ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #26

ಮೂಲ : ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ ಸತ್ಯದ ಹಾದಿಯ ಮೇಲೆ ನಮ್ಮನ್ನು ಕೈ ಹಿಡಿದು ಮುನ್ನಡೆಸುವುದು ಹೃದಯವೇ ಹೊರತು ಬುದ್ಧಿಯಲ್ಲ. ಈ ಪ್ರಯಾಣದಲ್ಲಿ ಹೃದಯ ನಿಮ್ಮ ಪ್ರಧಾನ ಮಾರ್ಗದರ್ಶಿಯಾಗಿರಲಿ. ‘ಅಹಂ’ ತಕರಾರು ಮಾಡಿದರೆ ಮುಟ್ಟಿ ಮಾತನಾಡಿಸಿ, ಒಪ್ಪಿಸಿ ಸಾಧ್ಯವಾಗದಿದ್ದರೆ ಸವಾಲು ಹಾಕಿ ಭೀಕರ ಯುದ್ಧವಾದರೂ ಚಿಂತೆಯಲ್ಲ ಹೃದಯ, ನಿಮ್ಮ ಸುಳ್ಳು ಅಹಂ ಮೇಲೆ ವಿಜಯ ಸಾಧಿಸಲಿ. ನಿಮ್ಮೊಳಗಿನ ‘ಅಹಂ’ ನ ಎಳೆಗಳನ್ನು ಸ್ಪಷ್ಟವಾಗಿ ಗುರುತಿಸಬಲ್ಲಿರಾದರೆ, ಸತ್ಯದ ಹಾದಿಯಲ್ಲಿನ ದೊಡ್ಡ ಆತಂಕವೊಂದನ್ನು […]